ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಮತದಾರ ನೋಂದಣಿ ಕೇಂದ್ರದ ಮೇಲೆ ಭಾನುವಾರ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
ಅಫ್ಘಾನಿಸ್ತಾನದಲ್ಲಿ ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಈ ವೇಳೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 57 ಮಂದಿ ಮೃತಪಟ್ಟಿದ್ದು, 119 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವಕ್ತಾರ ವಹೀದ್ ಮಜ್ರೊ ಅವರು ಹೇಳಿದ್ದಾರೆ.
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಈ ದಾಳಿಯನ್ನು ಹೊಣೆ ಹೊತ್ತುಕೊಂಡಿದೆ.