ಗಿಲ್ಗಿಟ್-ಬಾಲ್ಟಿಸ್ತಾನ ಶಾಲೆಗಳ ಮೇಲೆ ದಾಳಿ; ಮೂಲಭೂತವಾದಿಗಳ ನಡೆ ಖಂಡನೀಯ: ಮಲಾಲಾ ಯೂಸುಫ್ ಝೈ

ಹೆಣ್ಣು ಮಕ್ಕಳ ಶಿಕ್ಷಣ ವಿರೋಧಿಸಿ 12 ಶಾಲೆಗಳಿಗೆ ಬೆಂಕಿ ಇಟ್ಟು ಧ್ವಂಸ ಮಾಡಿದ್ದ ಮೂಲಭೂತ ವಾದಿಗಳ ನಡೆಯನ್ನು ಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫೈ ಝೈ ತೀವ್ರವಾಗಿ ಖಂಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್: ಹೆಣ್ಣು ಮಕ್ಕಳ ಶಿಕ್ಷಣ ವಿರೋಧಿಸಿ 12 ಶಾಲೆಗಳಿಗೆ ಬೆಂಕಿ ಇಟ್ಟು ಧ್ವಂಸ ಮಾಡಿದ್ದ ಮೂಲಭೂತ ವಾದಿಗಳ ನಡೆಯನ್ನು ಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫೈ ಝೈ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ, ಹೆಣ್ಣು ಮಕ್ಕಳು ಓದುತ್ತಿದ್ದಾರೆ ಎಂಬ ಕಾರಣಕ್ಕೇ 12 ಶಾಲೆಗಳ ಮೇಲೆ ದಾಳಿ ಮಾಡಲಾಗಿದೆ. ಇದು ನಿಜಕ್ಕೂ ಖಂಡನೀಯ. ಅವರ ಗುರಿ ಶಾಲೆಗಳಲ್ಲ. ಶಾಲೆಗಳಲ್ಲಿ ವಿದ್ಯೆ ಕಲಿಯುತ್ತಿರುವ  ಹೆಣ್ಣು ಮಕ್ಕಳು. ಶಾಲೆಗಳನ್ನು ಮರು ನಿರ್ಮಾಣ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಮತ್ತೆ ಶಾಲೆಗೆ ಕರೆತನ್ನಿ. ಆ ಮೂಲಕ ಪ್ರತೀಯೊಬ್ಬ ಬಾಲಕ ಮತ್ತು ಬಾಲಕಿಗೆ ಶಿಕ್ಷಣ ಮಹತ್ವದ ಹಕ್ಕು ಎಂಬುದನ್ನು ಸಾರಿ ಹೇಳಬೇಕು ಎಂದು ಮಲಾಲಾ ಆಗ್ರಹಿಸಿದ್ದಾರೆ.
ಇನ್ನು ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ನ ಡಯಾಮಿರ್ ನಲ್ಲಿ ಮೂಲಭೂತವಾದಿಗಳು ಒಟ್ಟು 12 ಶಾಲೆಗಳಿಗೆ ಬೆಂಕಿ ಇಟ್ಟು ಧ್ವಂಸ ಮಾಡಿದ್ದಾರೆ. ಈ ಪೈಕಿ ಒಂದು ಶಾಲೆ ಬಾಲಕಿಯರ ಶಾಲೆಯಾಗಿದ್ದು, ಶಾಲೆಯಲ್ಲಿದ್ದ ಮಕ್ಕಳ ಪಠ್ಯ ಪುಸ್ತಕಗಳನ್ನೂ ಕೂಡ ಬೆಂಕಿಗಾಹುತಿ ಮಾಡಲಾಗಿದೆ. ಆದರೆ ಘಟನೆಯಲ್ಲಿ ಯಾರಿಗೂ ಸಾವುನೋವುಗಳಾದ ಕುರಿತು ವರದಿಯಾಗಿಲ್ಲ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com