ಸೌಹಾರ್ದತೆ ಸಂಕೇತ: 30 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಿದ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೌಹಾರ್ದತೆಯ ಸಂಕೇತವಾಗಿ 27 ಮೀನುಗಾರರು ಸೇರಿದಂತೆ ಒಟ್ಟು 30 ಭಾರತೀಯರನ್ನು ಪಾಕಿಸ್ತಾನ ಸೋಮವಾರ ಬಿಡುಗಡೆಗೊಳಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸೌಹಾರ್ದತೆಯ ಸಂಕೇತವಾಗಿ 27 ಮೀನುಗಾರರು ಸೇರಿದಂತೆ ಒಟ್ಟು 30 ಭಾರತೀಯರನ್ನು ಪಾಕಿಸ್ತಾನ ಸೋಮವಾರ ಬಿಡುಗಡೆಗೊಳಿಸಿದೆ. 
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ವಕ್ತಾರ ಮೊಹಮ್ಮದ್ ಫೈಸಲ್ ಅವರು, ಮಾನವೀಯ ಸಮಸ್ಯೆಗಳನ್ನು ರಾಜಕೀಯಗೊಳಿಸದಿರುವ ಪಾಕಿಸ್ತಾನ ಸ್ಥಿರ ನೀತಿಗೆ ಅನುಗುಣವಾಗಿ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ. 
27 ಮೀನುಗಾರರು ಸೇರಿದಂತೆ ಒಟ್ಟು 30 ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ. ಪಾಕಿಸ್ತಾನ ರಾಷ್ಟ್ರದಲ್ಲಿ ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದ್ದು, ಸೌಹಾರ್ದತೆಯ ಸಂಕೇತವಾಗಿ ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ. 
ಭಾರತ ಕೂಡ ಇದೇ ರೀತಿಯಲ್ಲಿಯೇ ನಡೆದುಕೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com