ಸಿಧು ಶಾಂತಿಯ ರಾಯಭಾರಿ, ಅವರ ವಿರುದ್ಧ ಟೀಕೆ ಸಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ...
ಇಮ್ರಾನ್ ಖಾನ್, ನವಜೋತ್ ಸಿಂಗ್ ಸಿಧು
ಇಮ್ರಾನ್ ಖಾನ್, ನವಜೋತ್ ಸಿಂಗ್ ಸಿಧು
Updated on: 
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ತೀವ್ರ ವಿವಾದಕ್ಕೆ ಕಾರಣವಾಗಿರುವ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಶಾಂತಿಯ ರಾಯಭಾರಿ ಎಂದು ಮಂಗಳವಾರ ಇಮ್ರಾನ್ ಖಾನ್ ಹೇಳಿದ್ದಾರೆ.
ನನ್ನ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಸಿಧು ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರು ಒಬ್ಬ ಶಾಂತಿಯ ರಾಯಭಾರಿ ಮತ್ತು ಅವರಿಗೆ ಪಾಕಿಸ್ತಾನದ ಜನತೆ ಅದ್ಭುತ ಪ್ರೀತಿ ಮತ್ತು ವಿಶ್ವಾಸ ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಬಂದ ಸಿಧು ಅವರನ್ನು ಭಾರತದಲ್ಲಿ ಟಾರ್ಗೆಟ್ ಮಾಡುತ್ತಿರುವವರು ಉಪ ಖಂಡದಲ್ಲಿ ಶಾಂತಿಯಿಂದ ದೂರವಾಗುತ್ತಿದ್ದಾರೆ. ಶಾಂತಿ ಇಲ್ಲದೆ ನಮ್ಮ ಜನ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ಸೇರಿದಂತೆ ಉಭಯ ದೇಶಗಳ ನಡುವಿನ ಎಲ್ಲಾ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಮಾತುಕತೆಯ ಮೂಲಕ ನಮ್ಮ ಭಿನ್ನಾಭಿಪ್ರಾಯ ಪರಿಹರಿಸಿಕೊಂಡು ವ್ಯಾಪಾರ ಆರಂಭಿಸಬೇಕು. ಬಡತನ ನಿವಾರಿಸಲು ಮತ್ತು ಉಪಖಂಡದ ಜನರನ್ನು ಮೇಲಕ್ಕೆತ್ತಲು ಉತ್ತಮವಾದ ಮಾರ್ಗವೆಂದರೆ ಮಾತುಕತೆ ಎಂದು ಪಾಕ್ ನೂತನ ಪ್ರಧಾನಿ ಹೇಳಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ತಬ್ಬಿಕೊಂಡ ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ಸಚಿವ ಸಿಧು ವಿರುದ್ಧ ತೀವ್ರ ಟೀಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com