ಸೋಮವಾರವಷ್ಟೇ ಇಮ್ರಾನ್ ಖಾನ್ ಅವರು ರಚನೆ ಮಾಡಿದ್ದ ವಿಶೇಷ ಕಾರ್ಯಾಚರಣೆ ಪಡೆ (ಎಸ್ ಟಿಎಫ್) ತನ್ನ ಮೊದಲ ಸಭೆ ನಡೆಸಿತ್ತು. ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು ಎನ್ನಲಾಗಿದೆ. ಹವಾಲ ದಂಧೆ, ಆರ್ಥಿಕ ವಂಚನೆ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಪ್ರಧಾನಿ ಇಮ್ರಾನ್ ಖಾನ್ ಅವರ ನಿರ್ದೇಶನದಂತೆ ಸ್ವಿಸ್ ಬ್ಯಾಂಕ್ ಸೇರಿದಂತೆ ವಿದೇಶಗಳಲ್ಲಿ ಕಳ್ಳಗಂಟಿಟ್ಟಿರುವವರ ಮೇಲೂ ಕಠಿಣ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ,