ಕೈಲಾಸ ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಿಬೆಟಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದು, ನೇಪಾಳದ ರಾಜಧಾನಿ ಕಠ್ಮಂಡುವಿಗೆ ಬಂದಿಳಿದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಠ್ಮಂಡು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ  ಟಿಬೆಟಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿದ್ದು, ನೇಪಾಳದ ರಾಜಧಾನಿ ಕಠ್ಮಂಡುವಿಗೆ ಬಂದಿಳಿದಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಕಠ್ಮಂಡುವಿನ ಹೋಟೆಲ್ ವೊಂದಕ್ಕೆ ರಾಹುಲ್ ಗಾಂಧಿ ಆಗಮಿಸಿರುವುದಾಗಿ  ನೇಪಾಳದಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇಂದು ಹೋಟೆಲ್ ನಲ್ಲಿಯೇ ವಾಸ್ತವ್ಯ ಹೂಡಲಿರುವ ರಾಹುಲ್ ಗಾಂಧಿ ನಾಳೆ ಕೈಲಾಸ ಮಾನಸ ಸರೋವರಕ್ಕೆ  ಭೇಟಿ ನೀಡಲಿದ್ದಾರೆ.

ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಂಡು ಪ್ರಧಾನಿ ನರೇಂದ್ರಮೋದಿ ಕಠ್ಮಂಡುವಿನಿಂದ ವಾಪಾಸ್ ಆದ ನಂತರ ರಾಹುಲ್ ಗಾಂಧಿ ಕಠ್ಮಂಡುವಿಗೆ ಆಗಮಿಸಿದ್ದು,  ನೇಪಾಳ ಮಾರ್ಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ  ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಆದರೆ. ಯಾವುದೇ ಪ್ರಾಣಪಾಯವಿಲ್ಲದೆ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಬಂದಿಳಿದಿದ್ದರು. ಇದಾದ  ಮೂರು ದಿನಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವುದಾಗಿ ರಾಹುಲ್ ಗಾಂಧಿ ಹೇಳಿದ್ದರು.

ಹಿಂದೂ ಪುರಾಣದಲ್ಲಿ ಕೈಲಾಸ ಮಾನಸ ಸರೋವರ  ಶಿವನ ನಿವಾಸವೆಂದು ಪರಿಗಣಿಸಲ್ಪಟ್ಟಿದೆ ಮತ್ತು ಪ್ರತಿವರ್ಷ ಜೂನ್ ಮತ್ತು ಸೆಪ್ಟೆಂಬರ್  ತಿಂಗಳಲ್ಲಿ  ಭಕ್ತಾಧಿಗಳು ಯಾತ್ರೆ ಕೈಗೊಳ್ಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com