2022 ಕ್ಕೆ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿರುವ ಭಾರತ: ಮೋದಿ ಘೋಷಣೆ

2022 ಕ್ಕೆ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on: 
ಅರ್ಜೆಂಟೀನಾ: 2022 ಕ್ಕೆ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆ ಆಯೋಜಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 
ಇನ್ನೆರಡು ವರ್ಷಗಳಲ್ಲಿ ಭಾರತ 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನಾಚರಣೆ ಮಾಡಲಿದ್ದು, ಅದೇ ವರ್ಷ ಭಾರತ ಮೊದಲ ಬಾರಿಗೆ ಜಿ-20 ಶೃಂಗಸಭೆಯನ್ನು ಆಯೋಜಿಸಲಿದೆ ಎಂದು ಮೋದಿ ಹೇಳಿದ್ದಾರೆ. 
ಅರ್ಜೆಂಟೀನಾದ ರಾಜಧಾನಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ 2020 ರ ವೇಳೆಗೆ 75 ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ, ಈ ಮಹತ್ವದ ಸಂದರ್ಭದಲ್ಲಿ ಭಾರತ ಜಿ-20 ಶೃಂಗಸಭೆಯನ್ನು ಆಯೋಜಿಸಲು ಉತ್ಸುಕವಾಗಿದೆ.  ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿರುವ ಭಾರತಕ್ಕೆ ಬನ್ನಿ ಎಂದು ಜಿ-20 ನಾಯಕರನ್ನು ಪ್ರಧಾನಿ ಆಹ್ವಾನಿಸಿದ್ದಾರೆ. 
ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಯುರೋಪಿಯನ್ ಯೂನಿಯನ್, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ, ಟರ್ಕಿ, ಯುಕೆ ಮತ್ತು ಯುಎಸ್ ರಾಷ್ಟ್ರಗಳು ಜಿ-20 ಸದಸ್ಯರಾಗಿದ್ದು,  ವಿಶ್ವದ ಶೇ.80 ರಷ್ಟು ಜಿಡಿಪಿಯನ್ನು ಹೊಂದಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com