ಬ್ಯೂನೆಸ್ ಐರಿಸ್: ಭಾರತ ಕಳೆದ ವರ್ಷ ಭಾರತದಲ್ಲಿ ನಡೆದ ಫೀಫಾ U-17 ವಿಶ್ವಕಪ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ನಂತರ ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವುದನ್ನು ತಪ್ಪಿಸಿಕೊಂಡಿದ್ದರು. ಆದರೆ ಈಗ ಅರ್ಜೆಂಟೈನಾದಲ್ಲಿ ನಡೆಯುತ್ತಿರುವ 2018ರ ಜಿ20 ಶೃಂಗಸಭೆ ಸಂದರ್ಭ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ನರೇಂದ್ರ ಮೋದಿ ಅವರಿಗೆ ವಿಶೇಷ ಫುಟ್ಬಾಲ್ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.