40 ವರ್ಷಗಳು ಸಾಕು; ಶಾಂತಿ ಸ್ಥಾಪನೆಗೆ ಶ್ರಮಿಸುತ್ತಿರುವ ಪ್ರಧಾನಿ ಮೋದಿಗೆ ಬೆಂಬಲ ನೀಡಿ: ಪಾಕ್'ಗೆ ಅಮೆರಿಕಾ

ದಕ್ಷಿಣ ಏಷ್ಯಾದ ಶಾಂತಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಜವಾಬ್ದಾರಿಯುತ ರಾಷ್ಟ್ರಕ್ಕೆ 40 ವರ್ಷಗಳು ಸಾಕು, ಶಾಂತಿ ಸ್ಥಾಪನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶ್ರಮಿಸುತ್ತಿದ್ದು, ಮೋದಿಯವರನ್ನು ಬೆಂಬಲಿಸುವಂತೆ ಪಾಕಿಸ್ತಾನಕ್ಕೆ ಅಮೆರಿಕಾ ತಿಳಿಸಿದೆ...
ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ವಾಷಿಂಗ್ಟನ್: ದಕ್ಷಿಣ ಏಷ್ಯಾದ ಶಾಂತಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಜವಾಬ್ದಾರಿಯುತ ರಾಷ್ಟ್ರಕ್ಕೆ 40 ವರ್ಷಗಳು ಸಾಕು, ಶಾಂತಿ ಸ್ಥಾಪನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶ್ರಮಿಸುತ್ತಿದ್ದು, ಮೋದಿಯವರನ್ನು ಬೆಂಬಲಿಸುವಂತೆ ಪಾಕಿಸ್ತಾನಕ್ಕೆ ಅಮೆರಿಕಾ ತಿಳಿಸಿದೆ. 
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಿದ ಬಳಿಕ, ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಲು ಕೈಜೋಡಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿರುವ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. 

ಈ ವೇಳೆ ಪಾಕಿಸ್ತಾನದ ವಿರುದ್ಧ ಮ್ಯಾಟಿಸ್ ವಾಗ್ದಾಳಿ ನಡೆಸಿದ್ದು, ಶಾಂತಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಪ್ರತಿ ಜವಾಬ್ದಾರಿಯುತ ರಾಷ್ಟ್ರದ ಬೆಂಬಲವನ್ನು ನಾವು ಎದುರು ನೋಡುತ್ತಿದ್ದೇವೆ. 40 ವರ್ಷಗಳಲ್ಲಿ ಅಫ್ಘಾನಿಸ್ತಾನದ ಯುದ್ಧ ಸಾಕಷ್ಟು ಇಳಿದಿದೆ ಎಂದು ಹೇಳಿದ್ದಾರೆ. 

ವಿಶ್ವಸಂಸ್ಥೆ, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಮತ್ತು ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿರುವ ಎಲ್ಲರನ್ನೂ ಬೆಂಬಲಿಸುವ ಸಮಯ ಇದಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com