ದ್ವೀಪರಾಷ್ಟ್ರದ ರಾಜಕೀಯ ಸಂಘರ್ಷಕ್ಕೆ ತೆರೆ: ಮತ್ತೆ ಶ್ರೀಲಂಕಾ ಪ್ರಧಾನಿ ಹುದ್ದೆಗೇರಿದ ರನೀಲ ವಿಕ್ರಮಸಿಂಘೆ.

: ಶ್ರೀಲಂಕಾದ ಯುನೈಟೆಡ್ ನ್ಯಾಷನಲ್ ಪಾರ್ಟ್ ಅಧ್ಯಕ್ಷ ರನೀಲ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೇರಿದ್ದಾರೆ.
ರನೀಲ ವಿಕ್ರಮಸಿಂಘೆ
ರನೀಲ ವಿಕ್ರಮಸಿಂಘೆ
ಕೊಲಂಬೋ: ಶ್ರೀಲಂಕಾದ ಯುನೈಟೆಡ್ ನ್ಯಾಷನಲ್ ಪಾರ್ಟ್ ಅಧ್ಯಕ್ಷ ರನೀಲ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೇರಿದ್ದಾರೆ.
ವಿಕ್ರಮಸಿಂಘೆ ಭಾನುವಾರ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕಳೆದ 51 ದಿನಗಳ ಕಾಲ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ತೆರೆ ಬಿದ್ದಂತಾಗಿದೆ.
ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ವಿಕ್ರಮಸಿಂಘೆ ಅವರಿಗೆ ಇಂದು ಪ್ರಮಾಣವಚನ ಬೋಧಿಸಿದ್ದಾರೆ. ಕಳೆದ ಅಕ್ಟೋಬರ್ 26ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಪ್ರಧಾನಿ ಹುದ್ದೆಯಿಂದ ಉಚ್ಚಾಟಿತರಾಗಿದ್ದ ವಿಕ್ರಮಸಿಂಘೆ ಇಂದು ಮತ್ತೆ ಅಧಿಕಾರ ಸ್ವೀಕರಿಸಿದರು.
ವಿಕ್ರಮಸಿಂಘೆ ಅವರ ಉಚ್ಚಾಟನಾ ಪ್ರಕ್ರಿಯೆಯು ದ್ವೀಪರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಅಲ್ಲದೆ ಸಂವಿಧಾನಿಕ ಬಿಕ್ಕಟ್ಟಿಗೆ ಸಹ ಕಾರಣವಾಗಿತ್ತು.
ವಿಕ್ರಮಸಿಂಘೆ ಉಚ್ಚಾಟನೆ ಬಳಿಕ ಪ್ರಧಾನಿಯಾಗಿದ್ದ ಮಹಿಂದ ರಾಜಪಕ್ಷೆ ಶ್ರೀಲಂಕಾ ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಶನಿವಾರ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com