ಬಾಂಗ್ಲಾ ಚುನಾವಣೆ: ಹಾಲಿ ಪ್ರಧಾನಿ ಶೇಖ್ ಹಸೀನಾ ಪಕ್ಷಕ್ಕೆ ಮುನ್ನಡೆ

ಬಾಂಗ್ಲಾದೇಶದಲ್ಲಿ ನಡೆದಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳು ಹೆಚ್ಚಿವೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಢಾಕಾ: ಬಾಂಗ್ಲಾದೇಶದಲ್ಲಿ ನಡೆದಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆಗಳು ಹೆಚ್ಚಿವೆ. 
ಪ್ರಾರಂಭದಲ್ಲಿ ಫಲಿತಾಂಶ ಘೋಷಣೆಯಾದ 29 ಸ್ಥಾನಗಳ ಪೈಕಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಉಳಿದ ಕ್ಷೇತ್ರಗಳಲ್ಲಿಯೂ ಮುನ್ನಡೆಯಲ್ಲಿದೆ. 
ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾ ಪ್ರಧಾನ ವಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷ, ಅವಾಮಿ ಲೀಗ್ ಪಕ್ಷದ ವಿರುದ್ಧ ಮತಗಳನ್ನು ತಿರುಚಿರುವ (ವೋಟ್ ರಿಗ್ಗಿಂಗ್) ಆರೋಪ ಮಾಡಿದೆ. ಇದೇ ಕಾರಣಕ್ಕಾಗಿ ಉಭಯ ಪಕ್ಷಗಳ ನಡುವಿನ ಕಾರ್ಯಕರ್ತರು, ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದ್ದು,  ಪೊಲೀಸರ ಗುಂಡೇಟಿಗೆ ಮೂವರು ಸಾವನ್ನಪ್ಪಿದ್ದಾರೆ. ಘರ್ಷಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಪ್ರತಿಪಕ್ಷದ ಕಾರ್ಯಕರ್ತರಿಂದ ಓರ್ವ ಪೊಲೀಸ್ ಅಧಿಕಾರಿ ಸಹ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com