ಪಾಕಿಸ್ತಾನದಿಂದ 47 ಭಾರತೀಯ ಮೀನುಗಾರರ ಬಂಧನ

ಅರಬೀಯನ್ ಸಮುದ್ರದ ಗಡಿಭಾಗದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ 47 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.
ಭಾರತೀಯ ಮೀನುಗಾರರ  (ಸಾಂದರ್ಭಿಕ ಚಿತ್ರ)
ಭಾರತೀಯ ಮೀನುಗಾರರ (ಸಾಂದರ್ಭಿಕ ಚಿತ್ರ)
Updated on: 

ಅರಬೀಯನ್ ಸಮುದ್ರದ ಗಡಿಭಾಗದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ 47 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.

 ಪಾಕಿಸ್ತಾನಕ್ಕೆ ಸೇರಿದ ಪ್ರದೇಶದೊಳಗೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ 47 ಮಂದಿ ಭಾರತೀಯ ನಾವಿಕರನ್ನು ಬಂಧಿಸಲಾಗಿದ್ದು, 9 ಹಡಗುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

 ಬಂಧಿತ ಮೀನುಗಾರರನ್ನು  ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಹಡಗುಗಳು ಪಾಕಿಸ್ತಾನಕ್ಕೆ ಸೇರಿರುವ ಪ್ರದೇಶಕ್ಕೆ ಪ್ರವೇಶಿಸುವ ಮೂಲಕ ನಿಯಮ ಉಲ್ಲಂಘಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿಯೇ ಕ್ಷಿಪ್ರ ದಾಳಿ ಹಡಗುಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಜನವರಿ 19ರಂದು ಅಕ್ರಮ ಮೀನುಗಾರಿಕೆ ಹಿನ್ನೆಲೆಯಲ್ಲಿ 17 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಂಧಿಸಿತ್ತು.ಡಿಸೆಂಬರ್- ಜನವರಿ ತಿಂಗಳಲ್ಲಿ ಒಳ್ಳೆಯ ನಡತೆ ಆಧಾರದ ಮೇಲೆ 292 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಬಂಧನದಿಂದ  ಬಿಡುಗಡೆ ಮಾಡಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com