ಗಡಿಯಲ್ಲಿ ನಾಗರೀಕರ ಸಾವು; ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ಭಾರತದ ವಿರುದ್ಧವೇ ಆರೋಪವನ್ನು ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್: ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ನಾಗರೀಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ, ಇದೀಗ ಭಾರತದ ವಿರುದ್ಧವೇ ಆರೋಪವನ್ನು ಮಾಡಿದೆ. 
ಗಡಿಯಲ್ಲಿ ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಹಿಳೆ ಹಾಗೂ ಯುವಕನೊಬ್ಬ ಸಾವನ್ನಪ್ಪಿದ್ದಾರೆಂದು ಆರೋಪಿಸಿ, ಪಾಕಿಸ್ತಾನದಲ್ಲಿರುವ ಭಾರತದ ಉಪ ಹೈಕಮಿಷನರ್ ಜೆ.ಪಿ. ಸಿಂಗ್ ಅವರಿಗೆ, ಪಾಕಿಸ್ತಾನ ಮಹಾ ನಿರ್ದೇಶಕ ಮೊಹಮ್ಮದ್ ಫೈಸಲ್ ಅವರು ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 
ಪಾಕಿಸ್ತಾನ ವಿದೇಶಾಂಗ ಕಚೇರಿ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು, ಭಾರತೀಯ ಸೇನೆ ಕಳೆದ ಭಾನುವಾರ ನೆಜಾಪಿರ್, ನಿಕಿಯಾಲ್ ಮತ್ತು ಕರೇಲಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿದೆ. 2018ನೇ ಸಾಲಿನಲ್ಲಿ ಭಾರತೀಯ ಸೇನೆ ಒಟ್ಟು 190 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪರಿಣಾಮ 13 ನಾಗರೀಕರು ಸಾವನ್ನಪ್ಪಿದ್ದಾರೆಂದು ಆರೋಪಿಸಿದೆ. 
ಕಳೆದ ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನ, ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಕ್ಯಾಪ್ಟನ್ ಸೇರಿ ಒಟ್ಟು ನಾಲ್ವರು ಯೋಧರು ಹುತಾತ್ಮರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com