ಭಾರತೀಯ ಸೇರಿ ಇಬ್ಬರು ವಿದೇಶಿ ಪತ್ರಕರ್ತರಿಗೆ ಮಾಲ್ಡೀವ್ಸ್ ತೊರೆಯಲು ಆದೇಶ

ವಲಸೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯ ಮೂಲಕ ಎಎಫ್ ಪಿ ಸುದ್ದಿ ಸಂಸ್ಥೆಯ ಪತ್ರಕರ್ತ ಸೇರಿದಂತೆ ಇಬ್ಬರು...
ರಾಜಕೀಯ ಖೈದಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ವಶಕ್ಕೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ
ರಾಜಕೀಯ ಖೈದಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ವಶಕ್ಕೆ ಪಡೆಯುತ್ತಿರುವ ಭದ್ರತಾ ಸಿಬ್ಬಂದಿ
ಮಾಲೆ: ವಲಸೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯ ಮೂಲಕ ಎಎಫ್ ಪಿ ಸುದ್ದಿ ಸಂಸ್ಥೆಯ ಪತ್ರಕರ್ತ ಸೇರಿದಂತೆ ಇಬ್ಬರು ವಿದೇಶಿ ಪತ್ರಕರ್ತರನ್ನು ಮಾಲ್ಡೀವ್ಸ್ ಪೊಲೀಸರು ಶನಿವಾರ ಬಂಧಿಸಿದ್ದು, ಇಬ್ಬರಿಗೂ ದೇಶ ತೊರೆಯುವಂತೆ ಆದೇಶಿಸಲಾಗಿದೆ.
ಮಾಲ್ಡೀವ್ಸ್ ನಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಭಾರತೀಯ ಪತ್ರಕರ್ತ ಮೋನಿ ಶರ್ಮಾ ಹಾಗೂ ಭಾರತೀಯ ಮೂಲದ ಬ್ರಿಟಿಷ್ ನಾಗರಿಕ ಆತಿಶ್ ರವಿ ಪಟೇಲ್ ಅವರನ್ನು ಬಂಧಿಸಿ, ವಲಸೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.
ಈ ಇಬ್ಬರು ಪತ್ರಕರ್ತರು ಮಾಲ್ಡೀವ್ಸ್ ವಲಸೆ ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದ್ದು, ಇಬ್ಬರೂ ಪ್ರವಾಸಿ ವೀಸಾದ ಮೇಲೆ ಆಗಮಿಸಿ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಧಿತ ಪತ್ರಕರ್ತರ ಮೇಲೆ ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ. ಆದರೆ ಈ ಕೂಡಲೇ ದೇಶ ತೊರೆಯುವಂತೆ ಸೂಚಿಸಲಾಗಿದೆ ಎಂದು ಮಾಲ್ಡೀವ್ಸ್ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com