ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಡಲಿದೆ: ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥ

ಭಾರತ-ಪಾಕಿಸ್ತಾನವಷ್ಟೇ ಅಲ್ಲ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸಹ ಈಗಿರುವುದಕ್ಕಿಂತಲೂ ಹೆಚ್ಚು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥರು ಹೇಳಿದ್ದಾರೆ.
ಭಾರತ-ಚೀನಾ
ಭಾರತ-ಚೀನಾ
ನವದೆಹಲಿ: ಭಾರತ-ಪಾಕಿಸ್ತಾನವಷ್ಟೇ ಅಲ್ಲ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸಹ ಈಗಿರುವುದಕ್ಕಿಂತಲೂ ಹೆಚ್ಚು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥರು ಹೇಳಿದ್ದಾರೆ. 
ಮೂರು ತಿಂಗಳ ಡೊಕ್ಲಾಮ್ ವಿವಾದವನ್ನು ಬಗೆಹರಿಸಿಕೊಳ್ಳಲಾಗಿದೆಯಾದರೂ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಈಗಿರುವುದಕ್ಕಿಂತಲೂ ಮತ್ತಷ್ಟು ಹದಗೆಡಲಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಾರೆ. 
ಚೀನಾ ಸರ್ಕಾರಿ ಸ್ವಾಮ್ಯದ ಮಾಧ್ಯಮ ಹಾಗೂ ವಿದೇಶಾಂಗ ಇಲಾಖೆ ಭಾರತದ ವಿರುದ್ಧ ಆಕ್ರಮಣಕಾರಿ ಭಾಷೆಯನ್ನು ಬಳಸುತ್ತದೆ. ಭಾರತ-ಚೀನಾ ಇವುಗಳಿಗೆ ಉತ್ತೇಜನ ನೀಡದೇ ಇದ್ದರೂ ದ್ವಿಪಕ್ಷೀಯ ಸಂಬಂಧ ಈಗಿರುವುದಕ್ಕಿಂತಲೂ ಹದಗೆಡಲಿದೆ ಎಂದು ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com