ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಹೇಳಿದೆ.
ಪ್ರಧಾನಿ ಮೋದಿ ಅವರು ಇಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ವರದಿಗಳ ಕುರಿತು ಪ್ರತಿಕ್ರಿಯಿಸಿದ ಗೆಂಗ್ ಶುವಾಂಗ್ ಅವರು, ಚೀನಾ-ಭಾರತ ಗಡಿಯಲ್ಲಿ ಚೀನಾದ ಸ್ಥಾನ ಸ್ಥಿರ ಮತ್ತು ಸ್ಪಷ್ಟವಾಗಿದೆ ಎಂದಿದ್ದಾರೆ.
ವಿವಾದಿತ ಪ್ರದೇಶಕ್ಕೆ ಪ್ರಧಾನಿ ಮೋದಿ ನೀಡಿರುವುದನ್ನು ಚೀನಾ ಬಲವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ರಾಜತಾಂತ್ರಿಕ ಪ್ರತಿಭಟನೆ ದಾಖಲಿಸುವುದಾಗಿ ಶುವಾಂಗ್ ಹೇಳಿರುವುದಾಗಿ ಚೀನಾ ಸರ್ಕಾರಿ ಮಾಧ್ಯಮ ಕ್ಸಿನ್ಹುಆ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಧಾನಿ ಮೋದಿಯವರು ತ್ರಿಪುರಾಕ್ಕೆ ಭೇಟಿ ನೀಡಿದ ನಂತರ ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಹಲವು ಯೋಜನೆಗಳ ಚಾಲನೆ ನೀಡಿ ಮಾತನಾಡಿದರು.