ಪಾಕ್ ವಿರುದ್ದ ಟ್ರಂಪ್ ಕೆಂಡ: 255 ಮಿಲಿಯನ್ ಡಾಲರ್ ನೆರವಿಗೆ ಕತ್ತರಿ!

ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ ಇದೀಗ ಪಾಕಿಸ್ತಾನಕ್ಕೆ ತಾನು ನೀಡಬೇಕಿದ್ದ ಆರ್ಥಿಕೆ ನೆರವಿಗೆ ಕತ್ತರಿ ಹಾಕಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ವಾಷಿಂಗ್ಟನ್: ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ ಇದೀಗ ಪಾಕಿಸ್ತಾನಕ್ಕೆ ತಾನು ನೀಡಬೇಕಿದ್ದ ಆರ್ಥಿಕೆ ನೆರವಿಗೆ ಕತ್ತರಿ ಹಾಕಿದೆ. 
ಮೂಲಗಳ ಪ್ರಕಾರ ಪಾಕಿಸ್ತಾನಕ್ಕೆ ಅಮೆರಿಕ ನೀಡಬೇಕಿದ್ದ ಸುಮಾರು 255 ಮಿಲಿಯನ್ ಡಾಲರ್ ಆರ್ಥಿಕ ನೆರವಿಗೆ ಅಮೆರಿಕ ಸರ್ಕಾರ ಬ್ರೇಕ್ ಹಾಕಿದ್ದು, ಈ ಬಗ್ಗೆ ಸ್ವತಃ ವೈಟ್ ಹೌಸ್ ಸ್ಪಷ್ಟನೆ ನೀಡಿದೆ. ಪಾಕಿಸ್ತಾನ ಭಯೋತ್ಪಾದನೆ  ಸಂಬಂಧ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ಅದಕ್ಕೆ ನೀಡಲಾಗುವ ಆರ್ಥಿಕ ನೆರವನ್ನು ನಿರ್ಧರಿಸಲಾಗುತ್ತದೆ ಎಂದು ಹೇಳಿದೆ.
ವೈಟ್ ಹೌಸ್ ಮೂಲಗಳ ಪ್ರಕಾರ 2016ನೇ ಆರ್ಥಿಕ ವರ್ಷದಲ್ಲಿ ಅಮೆರಿಕ ವ್ಯಯಿಸಬೇಕಿದ್ದ ಸುಮಾರು 255 ಮಿಲಿಯನ್ ಡಾಲರ್ ಹಣವನ್ನು ಪಾಕಿಸ್ತಾನಕ್ಕೆ ಈ ವರೆಗೂ ನೀಡಿಲ್ಲ. ಈ ಹಿಂದೆ ಸಾಕಷ್ಟು ನೆಪವೊಡ್ಡಿ ಅಮೆರಿಕ ಈ ನೆರವಿಗೆ  ಬ್ರೇಕ್ ಹಾಕಿತ್ತು. ಇದೀಗ ಮತ್ತೆ ಪಾಕಿಸ್ತಾನದ ಆರ್ಥಿಕ ನೆರವಿಗೆ ತಡೆ ನೀಡಿದೆ. ಅಂತೆಯೇ ಕಳೆದ 15 ವರ್ಷದಲ್ಲಿ ಅಮೆರಿಕ 33 ಬಿಲಿಯನ್ ಡಾಲರ್ ಹಣವನ್ನು ಪಾಕಿಸ್ತಾನಕ್ಕೆ ನೀಡಿದೆ. ಆದರೆ ಇದೀಗ 2016ನೇ ಆರ್ಥಿಕ ವರ್ಷದಲ್ಲಿ  ಪಾಕಿಸ್ತಾನಕ್ಕೆ ನೀಡಬೇಕಿರುವ ಹಣವನ್ನು ನೀಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ವೈಟ್ ಹೌಸ್ ಸ್ಪಷ್ಟಪಡಿಸಿದೆ.
ನಿನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿದ್ದ ಆರ್ಥಿಕ ನೆರವನ್ನು ಪಾಕಿಸ್ತಾನ ಸದ್ಬಳಕೆ ಮಾಡಿಕೊಂಡಿಲ್ಲ ಎಂದು ಆರೋಪಿಸಿದ್ದರು. ಅಲ್ಲದೆ ಇನ್ನು ಮುಂದೆ ಇಂತಹ ನೆರವು  ಮುಂದುವರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com