ವಿವಿಐಪಿ ಚಾಪರ್ ಹಗರಣ; ಇಟಲಿ ಕೋರ್ಟ್ ನಿಂದ ಪ್ರಮುಖ ಆರೋಪಿಗಳ ಖುಲಾಸೆ!

ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಇಟಲಿ ನ್ಯಾಯಾಲಯ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಇಟಲಿ ನ್ಯಾಯಾಲಯ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಮೂಲಗಳ ಪ್ರಕಾರ ಹಗರಣದ ಪ್ರಮುಖ ಆರೋಪಿಯಾದ ಫಿನ್ ಮೆಕಾನಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಗಿಸೆಪ್ಪೆ ಓರ್ಸಿ ಮತ್ತು ಅಗಸ್ಟಾ ವೆಸ್ಟ್ ಲ್ಯಾಂಡ್ ಸಂಸ್ಥೆಯ ಸಹಾಯಕ ನಿರ್ದೇಶಕ ಬ್ರುನೋ ಸ್ಪಾಗ್ನಲೋನಿ ಅವರನ್ನು ಇಟಲಿ  ನ್ಯಾಯಾಲಯ ಖುಲಾಸೆಗೊಳಿಸಿದೆ. ಅಂತಾರಾಷ್ಟ್ರೀಯ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ  ಎಂದು ಹೇಳಲಾಗುತ್ತಿದೆ. ಭಾರತಕ್ಕೆ 12 ವಿವಿಐಪಿ ಹೆಲಿಕಾಪ್ಟರ್ ಮಾರಾಟ ಸಂಬಂಧ ಫಿನ್ ಮೆಕಾನಿಕಾ ಮತ್ತು ಅಗಸ್ಟಾ ವೆಸ್ಟ್ ಲ್ಯಾಂಡ್ ಸಂಸ್ಥೆಯ ಅಧಿಕಾರಿಗಳು ಭಾರತೀಯ ನೌಕಾಪಡೆ ಅಧಿಕಾರಿಗಳಿಗೆ ಬಹುಕೋಟಿ ಕಿಕ್ ಬ್ಯಾಕ್  ನೀಡಿದ್ದರು ಎಂಬ ಗಂಭೀರ ಆರೋಪವಿದೆ. 
ಈ ಸಂಬಂಧ 2016ರಲ್ಲಿ ಮಿಲಾನ್ ನಲ್ಲಿ ಇಟಲಿ ನ್ಯಾಯಾಲಯ ಆರೋಪಿಗಳ ವಿರುದ್ಧ ತನಿಖೆ ಘೋಷಣೆ ಮಾಡಿತ್ತು. ಇದೀಗ ಈ ಹಗರಣದ ಇಬ್ಬರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದು, ಪ್ರಕರಣ  ಸಂಬಂಧ ಆರೋಪಿಗಳ ಮೇಲೆ ಹೊರಿಸಲಾಗಿದ್ದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ. ಆರೋಪಗಳನ್ನು ಸಾಬೀತು ಪಡಿಸುವ ಪ್ರಬಲ ಸಾಕ್ಷ್ಯಗಳಿಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com