ಇದಕ್ಕೆ ಮೊದಲು ಮಾತನಾಡಿದ ಅಮೆರಿಕ ಪ್ರತಿನಿಧಿ, ಪಾಕಿಸ್ತಾನದಲ್ಲಿ ಭಯೋತ್ಪಾದಕರ ಸುರಕ್ಷಿತ ಸ್ವರ್ಗದ ಯಥಾಸ್ಥಿತಿಯನ್ನು ಒಪ್ಪಿಕೊಳ್ಳಲಾಗದು ಎಂದು ಸಾರಿದರು. ಈ ಮೂಲಕ ಭಾರತ, ಆಫ್ಘಾನಿಸ್ತಾನ ಮತ್ತು ಅಮೆರಿಕ ದೇಶಗಳ ಪ್ರತಿನಿಧಿಗಳು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಪಾಕಿಸ್ತಾನ ಉಗ್ರರ ಸ್ವರ್ಗವಾಗುತ್ತಿದೆ. ಮೊದಲು ತನ್ನ ನಿಲುವನ್ನು ಬದಲಿಸಿಕೊಳ್ಳಬೇಕು. ಭಯೋತ್ಪಾದನೆಯಲ್ಲಿ ಒಳ್ಳೆಯ ಭಯೋತ್ಪಾದನೆ ಕೆಟ್ಟ ಭಯೋತ್ಪಾದನೆ ಎಂಬುದಿಲ್ಲ.. ಭಯೋತ್ಪಾದನೆಯಲ್ಲೂ ಇಂತಹ ದ್ವಿಮಾನದಂಡ ಸರಿಯಲ್ಲ ಎಂದು ಪಾಕಿಸ್ತಾನವನ್ನು ಟೀಕಿಸಿದ್ದವು. ಅಂತೆಯೇ ಈ ಬಗ್ಗೆ ಪಾಕಿಸ್ತಾನ ಸರ್ಕಾರ ಕಠಿಣ ನಿಲುವು ತಳೆಯಬೇಕು ಎಂದು ಒತ್ತಾಯಿಸಿವೆ.