
ಇಸ್ಲಾಮಾಬಾದ್ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೊಳ್ಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತೆ ಪಾಕಿಸ್ತಾನಕ್ಕೆ ಬರಲಿದ್ದಾರೆ. ಜುಲೈ 25 ರಂದು ನಡೆಯಲಿರುವ ಚುನಾವಣೆಯಲ್ಲಿ ಜನತೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಷರೀಫ್ ಪುತ್ರಿ ಮರ್ಯಮ್ ಹೇಳಿದ್ದಾರೆ.
ಷರೀಫ್ ಅವರ ಮೇಲಿನ ಮೂರು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಅಕೌಂಟಬಿಲಿಟಿ ಕೋರ್ಟ್ ಷರೀಫ್ ಅವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 8 ಮಿಲಿಯನ್ ಪೌಂಡ್ ದಂಡ ಶಿಕ್ಷೆಯನ್ನು ಪ್ರಕಟಿಸಿತ್ತು.
ಷರೀಪ್ ಅವರಿಗೆ ಸಹಕರಿಸಿದ ಆರೋಪದ ಮೇರೆಗೆ ಅವರ ಪುತ್ರಿ ಮರ್ಯಮ್ ಅವರಿಗೆ ಏಳು ವರ್ಷ ಜೈಲು ಶಿಕ್ಷೆ 2 ಮಿಲಿಯನ್ ದಂಡವನ್ನು ವಿಧಿಸಲಾಗಿದೆ. ಮರ್ಯಮ್ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
Advertisement