ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ: ಝಾಕಿರ್ ನಾಯ್ಕ್

ವಿವಾದಾತ್ಮಕ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಂತೆಯೇ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಸಿಂಗಾಪುರ: ವಿವಾದಾತ್ಮಕ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಂತೆಯೇ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಝಾಕಿರ್ ನಾಯ್ಕ್, ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ. ನನ್ನ ಎಲ್ಲ ಭಾಷಣಗಳೂ ಶಾಂತಿಯನ್ನು ಉತ್ತೇಜಿಸುತ್ತವೆಯೇ ಹೊರತು ಭಯೋತ್ಪಾದನೆಯನ್ನಲ್ಲ. ವಿನಾ ಕಾರಣ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನನ್ನನ್ನು ಆರೋಪಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ನನ್ನ ವಿರುದ್ಧ ದೇಶದ್ರೋಹ, ಭಯೋತ್ಪಾದನೆ ಕುಮ್ಮಕ್ಕು, ಪ್ರಚೋದನಕಾರಿ ಭಾಷಣ, ಅಕ್ರಮ ಹಣ ವರ್ಗಾವಣೆ (ಹವಾಲಾ ದಂಧೆ) ಸೇರಿದಂತೆ ಹಲವು ಪ್ರಕರಣಗಳನ್ನು ಹೇರಲಾಗಿದೆ. ಇಸ್ಲಾಂ ಹೆಸರಲ್ಲಿ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ. ಅದಕ್ಕೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿಕೊಂಡಿದ್ದಾರೆ.
ಇನ್ನು ಮಲೇಷ್ಯಾದಲ್ಲಿ ಆಶ್ರಯ ಪಡೆದಿರುವ ಝಾಕಿರ್ ನಾಯ್ಕ್ ಇತ್ತೀಚೆಗಷ್ಟೇ ಮಲೇಷ್ಯಾ ಪ್ರಧಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ವೇಳೆ ಮಲೇಷ್ಯಾ ಪ್ರಧಾನಿ ಕೂಡ ಅವರನ್ನು ಮಲೇಷ್ಯಾದಿಂದ ಗಡಿಪಾರು ಮಾಡುವುದಿಲ್ಲ ಎಂದು ಮಾತು ನೀಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ರಾಜಕೀಯ ಸಲಹೆಗಾರರು ಕೂಡ ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಭಾರತಕ್ಕೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com