ಪಾಕ್ ಇತಿಹಾಸದಲ್ಲಿ ಮತ್ತೊಂದು ಭೀಕರ ಉಗ್ರ ದಾಳಿ, ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 128ಕ್ಕೆ ಏರಿಕೆ

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ನಿಮಿತ್ತ ಬಲೂಚಿಸ್ಥಾನದಲ್ಲಿ ನಡೆಯುತ್ತಿದ್ದ ಚುನಾವಣಾ ರ್ಯಾಲಿ ಮೇಲೆ ಭಯೋತ್ಪಾದಕರು ನಡೆಸಿದ್ದ ಬಾಂಬ್ ದಾಳಿಯಲ್ಲಿ ಸತ್ತವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಬಾಂಬ್ ಸ್ಫೋಟ ದುರಂತ ನಡೆದ ಸ್ಥಳ
ಬಾಂಬ್ ಸ್ಫೋಟ ದುರಂತ ನಡೆದ ಸ್ಥಳ
ಲಾಹೋರ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ನಿಮಿತ್ತ ಬಲೂಚಿಸ್ಥಾನದಲ್ಲಿ ನಡೆಯುತ್ತಿದ್ದ ಚುನಾವಣಾ ರ್ಯಾಲಿ ಮೇಲೆ ಭಯೋತ್ಪಾದಕರು ನಡೆಸಿದ್ದ ಬಾಂಬ್ ದಾಳಿಯಲ್ಲಿ ಸತ್ತವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿದ್ದು, ಬಾಂಬ್ ಸ್ಫೋಟದ ಬಳಿಕ ಗಂಭೀರವಾಗಿ ಗಾಯಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಹಲವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಾಗಲೂ ಕೆಲ ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದ್ದವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನದ ಇತಿಹಾಸದಲ್ಲೇ ಇಂದು ನಡೆದ ಉಗ್ರರ ಬಾಂಬ್ ದಾಳಿ ಅತ್ಯಂತ ಭೀಕರ ಸ್ಫೋಟಗಳಲ್ಲಿ ಒಂದಾಗಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದ ಮಸ್ತುಂಗ್ ಪ್ರದೇಶದಲ್ಲಿ ಉಗ್ರರು ಈ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಟ 128 ಮಂದಿ ಸಾವನಪ್ಪಿದ್ದಾರೆ ಎನ್ನಲಾಗಿದೆ. ಅಂತೆಯೇ ಘಟನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನೆಯಲ್ಲಿ ಬಲೂಚಿಸ್ತಾನ ಅವಾಮಿ ಪಾರ್ಟಿಯ ಮುಖಂಡ ಸಿರಾಜ್ ರೈಸಾನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಗಂಭೀರವಾಗಿ ಗಾಯಗೊಂಡಿರುವ ರೈಸಾನಿ ಅವರನ್ನು ಖ್ವೆಟ್ಟಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಅಯೂಬ್ ಅಚ್ಕಜೈ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com