10 ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ನವಾಜ್ ಷರೀಫ್

ಭ್ರಷ್ಟಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್, ಶಿಕ್ಷೆ ಪ್ರಮಾಣ ಹಾಗೂ ತಪ್ಪಿತಸ್ಥ ಎಂಬ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.
ಷರೀಫ್
ಷರೀಫ್
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್, ಶಿಕ್ಷೆ ಪ್ರಮಾಣ ಹಾಗೂ ತಪ್ಪಿತಸ್ಥ ಎಂಬ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.
ಲಂಡನ್ ನಲ್ಲಿ 4 ಐಷಾರಾಮಿ ಫ್ಲಾಟ್ ಗಳನ್ನು ಹೊಂದಿದ್ದ ಆರೋಪದಡಿ ನವಾಜ್ ಷರೀಫ್ ಪುತ್ರಿ ಮರ್ಯಮ್ ನವಾಜ್ ಅವರಿಗೂ ಪಾಕಿಸ್ತಾನ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಭ್ರಷ್ಟಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜನಾವ್ ಷರೀಫ್ ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. 
ಮರ್ಯಮ್ ನವಾಜ್ ಹಾಗೂ ನವಾಜ್ ಷರೀಫ್ ಇಬ್ಬರೂ ಅದಿಯಾಲ ಜೈಲಿನಲ್ಲಿದ್ದು, ಇನ್ನೂ ಎರಡು ಭ್ರಷ್ಟಾಚಾರ ಪ್ರಕ್ರಣಗಳು ಇತ್ಯರ್ಥವಾಗಬೇಕಿದೆ.  ಷರೀಫ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪವಿದ್ದು, ತನಿಖೆಗೆ ಸ್ಪಂದಿಸದೇ ಇದ್ದ ಹಿನ್ನೆಲೆಯಲ್ಲಿ ಒಂದು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಅಷ್ಟೇ ಅಲ್ಲದೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಒಂದು ವರ್ಷ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com