ಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ

ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ
ಪಾಕಿಸ್ತಾನ ಚುನಾವಣೆ:  ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ ಪ್ರಕಟವಾಗಿದೆ. 
ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುತ್ತಿರುವುದರ ಬಗ್ಗೆ ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿರುವ ಅಮೆರಿಕ, "ಲಷ್ಕರ್ ಉಗ್ರ ಸಂಘಟನೆ ಬಗ್ಗೆ ನಾವು ನಮ್ಮ ಆತಂಕವನ್ನು ಪಾಕಿಸ್ತಾನ ಸರ್ಕಾರಕ್ಕೆ ನಿರಂತರವಾಗಿ ಹೇಳುತ್ತಿದ್ದೇವೆ, ಈಗ ಲಷ್ಕರ್ ಸಂಘಟನೆಗೆ ಸೇರಿದ ಉಗ್ರ ಸಂಘಟನೆಗಳು ಚುನಾವಣೆಗೆ ಸ್ಪರ್ಧಿಸುತ್ತಿರುವುದರ ಬಗ್ಗೆಯೂ ಎಚ್ಚರಿಕೆ ನೀಡಿದ್ದೇವೆ ಎಂದು ಅಮೆರಿಕದ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 
ಪಾಕಿಸ್ತಾನದ ರಾಜಕಾರಣಿಗಳ ಮೇಲೆ ಭಯೋತ್ಪಾದಕ ದಾಳಿ ನಡೆದರೂ ಸಹ ಚುನಾವಣೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಅಮೆರಿಕದ 
ಸರ್ಕಾರ ಹೇಳಿತ್ತು. ಇದೇ ವೇಳೆ ಯುರೋಪಿಯನ್ ಯೂನಿಯನ್ ಸಹ ಪಾಕಿಸ್ತಾನದಲ್ಲಿ ಶಾಂತಿಯುತ ಚುನಾವಣೆ ನಡೆಯಬೇಕು ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com