ಬ್ರಿಕ್ಸ್ ಶೃಂಗಸಭೆ: ಶಿಕ್ಷಣ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಭಾರತ-ದಕ್ಷಿಣ ಆಫ್ರಿಕಾ ಸಹಿ

ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಉಭಯ ದೇಶಗಳು ಶಿಕ್ಷಣ ಸೇರಿದಂತೆ ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿವೆ.
ಪ್ರಧಾನಿ ಮೋದಿ ಸ್ವಾಗತಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ
ಪ್ರಧಾನಿ ಮೋದಿ ಸ್ವಾಗತಿಸಿದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಉಭಯ ದೇಶಗಳು ಶಿಕ್ಷಣ ಸೇರಿದಂತೆ ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿವೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಅಧ್ಯಕ್ಷ ಸಿರಿಲ್ ರಾಮಾಫೊಸಾ ಆತ್ಮೀಯವಾಗಿ ಬರಮಾಡಿಕೊಂಡರು. ಜೋಹಾನ್ಸ್ ಬರ್ಗ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಖುದ್ದು ಅಧ್ಯಕ್ಷ ಸಿರಿಲ್ ರಾಮಾಫೊಸಾ ವಿಮಾನ ನಿಲ್ದಾಣಕ್ಕೇ ಆಗಮಿಸಿ ಸ್ವಾಗತ ಕೋರಿದರು. 
ಬಳಿಕ ಶೃಂಗಸಭೆ ಆಯೋಜನೆಯಾಗಿರುವ ಖಾಸಗಿ ಹೊಟೆಲ್ ಗೆ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ  ಸಿರಿಲ್ ರಾಮಾಫೊಸಾ ತೆರಳಿದರು. ಈ ವೇಳೆ ಉಭಯ ದೇಶಗಳ ಮುಖಂಡರು ಮತ್ತು ಅಧಿಕಾರಿಗಳು ದ್ವಿಪಕ್ಷೀಯ  ಮಾತುಕತೆ ನಡೆಸಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಶಿಕ್ಷಣ, ಕೌಶಲ್ಯ ತರಬೇತಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ಉಭಯ ನಾಯಕರು ಸಹಿಹಾಕಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಿಂದ ಆರಂಭವಾಗಿರುವ 3 ದಿನಗಳ 10ನೇ ಬ್ರಿಕ್ಸ್ ಶೃಂಗಸಭೆ 'ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಅಂತರ್ಗತ ಬೆಳವಣಿಗೆ ಮತ್ತು ಹಂಚಿಕೆಯ ಸಮೃದ್ಧಿಗಾಗಿ ಸಹಯೋಗ' ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿದೆ. ಇನ್ನು ಶೃಂಗಸಭೆಯಲ್ಲಿ ಭಾರತ, ರಷ್ಯಾ, ಚೀನಾ, ಅರ್ಜೆಂಟೀನಾ, ದಕ್ಷಿಣ ಆಫ್ರಿಕಾ, ಬ್ರೆಜಿಲ್ ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com