ಚುನಾವಣೆ ಫಲಿತಾಂಶ 'ದೋಷಪೂರಿತ': ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಭ್ರಷ್ಟಾಚಾರ ಪ್ರಕರಣದ....
ನವಾಜ್ ಷರೀಫ್
ನವಾಜ್ ಷರೀಫ್
ಇಸ್ಲಾಮಾಬಾಬ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು, ಚುನಾವಣೆಯನ್ನು ಹೈಜಾಕ್ ಮಾಡಲಾಗಿದ್ದು, ಫಲಿತಾಂಶ 'ದೋಷಪೂರಿತ'ವಾಗಿದೆ ಎಂದು ಆರೋಪಿಸಿದ್ದಾರೆ.
ನನ್ನೆ ಚುನಾವಣೆ ಫಲಿತಾಂಶದ ಬಗ್ಗೆ ಅಡಿಯಾಲ ಜೈಲಿನಲ್ಲಿ ತಮ್ಮನ್ನು ಭೇಟಿ ಮಾಡಿದ ಪಿಎಂಎಲ್-ಎನ್ ಪಕ್ಷದ ಮುಖಂಡರೊಂದಿಗೆ ಮಾತನಾಡಿದ ಷರೀಫ್, ದೋಷಪೂರಿತ ಮತ್ತು ಸಂಶಯಾಸ್ಪದ ಫಲಿತಾಂಶಗಳು ದೇಶದ ರಾಜಕೀಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದಿದ್ದಾರೆ.
ಫೈಸಲಾಬಾದ್, ಲಾಹೋರ್ ಮತ್ತು ವಾವಲ್ ಪಿಂಡಿಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪಾಕ್ ಮಾಜಿ ಪ್ರಧಾನಿ, ಈ ಪ್ರದೇಶದಲ್ಲಿ ನಮ್ಮ ಅಭ್ಯರ್ಥಿಗಳು ಪ್ರಬಲವಾಗಿದ್ದರು. ಆದರೂ ಸೋಲು ಎಂದು ಘೋಷಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿರುವುದಾಗಿ ಡಾನ್ ವರದಿ ಮಾಡಿದೆ.
ಅಕ್ರಮವಾಗಿ ಸಂಪಾದಿಸಿದ ಹಣದಿಂದ ಲಂಡನ್ ನಲ್ಲಿ ನಾಲ್ಕು ಐಷಾರಾಮಿ ಫ್ಲಾಟ್ ಗಳನ್ನು ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಅಕೌಂಟಬಲಿಟಿ ಕೋರ್ಟ್ ನವಾಜ್ ಷರೀಫ್ ಅವರಿಗೆ 10 ವರ್ಷ, ಪುತ್ರಿ ಮರ್ಯಮ್ ಗೆ 7 ವರ್ಷ ಹಾಗೂ ಅಳಿಯ ಎಂ ಸಫ್ದಾರ್ ಅವರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಕಳೆದ ಜುಲೈ 13ರಂದು ಲಾಹೋರ್ ನಲ್ಲಿ ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com