ಇರ್ಮಾನ್ ಖಾನ್ ನೇತೃತ್ವದಲ್ಲಿ ಪಾಕಿಸ್ತಾನದಲ್ಲಿ ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಣ್ಣ ರಾಜಕೀಯ ಪಕ್ಷಗಳೊಂದಿಗೆ ಹಾಗೂ ಪಕ್ಷೇತರ ಅಭ್ಯರ್ಥಿಗಳೊಂದಿಗೆ ಈಗಾಗಲೇ ಮಾತುಕತೆ ಆರಂಭವಾಗಿದ್ದು, ಶೀಘ್ರದಲ್ಲೇ ನೂತನ ಸರ್ಕಾರ ರಚನೆಯಾಗಲಿದೆ ಎಂದು ಪಿಟಿಐ ನಾಯಕ ನಯೀನುಲ್ ಹಖ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.