ವಿಜಯ್ ಮಲ್ಯ
ವಿದೇಶ
ಹಸ್ತಾಂತರ ಪ್ರಕರಣ: ವಿಜಯ್ ಮಲ್ಯಗೆ ಜಾಮೀನು, ಸೆಪ್ಟೆಂಬರ್ 12ಕ್ಕೆ ವಿಚಾರಣೆ ಮುಂದೂಡಿಕೆ
ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶದಲ್ಲಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಪ್ರಕರಣದಲ್ಲಿ...
ಲಂಡನ್: ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶದಲ್ಲಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರ ಪ್ರಕರಣದಲ್ಲಿ ಜಾಮೀನು ಕುರಿತು ಅಂತಿಮ ವಿಚಾರಣೆ ಇಂದು ವೆಸ್ಟ್ ಮಿನಿಸ್ಟರ್ ನ್ಯಾಯಾಲಯದಲ್ಲಿ ನಡೆಯಿತು.
ಹೈ ಪ್ರೋಪೈಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12 ಕ್ಕೆ ಮುಂದೂಡಿದೆ.
ಹಸ್ತಾಂತರ ವಾರೆಂಟ್ ನಲ್ಲಿ ಬಂಧನಕ್ಕೊಳಗಾದ ನಂತರ ಜಾಮೀನು ಪಡೆದು ಕಳೆದ ವರ್ಷದ ಏಪ್ರಿಲ್ ತಿಂಗಳಿನಿಂದ 62 ವರ್ಷದ ಮಾಜಿ ಕಿಂಗ್ ಪಿಷರ್ ಏರ್ ಲೈನ್ಸ್ ಮುಖ್ಯಸ್ಥ ವಿಜಯ್ ಮಲ್ಯ ಲಂಡನ್ ನಲ್ಲಿಯೇ ನೆಲೆಸಿದ್ದು, 9 ಸಾವಿರ ಕೋಟಿ ರೂಪಾಯಿಗಳ ಹಣ ವರ್ಗಾವಣೆ ಹಾಗೂ ಭಾರತಕ್ಕೆ ಹಸ್ತಾಂತರ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.
ಮಗ ಸಿದ್ಧಾರ್ಥ್ ಜೊತೆಗೆ ಆಗಮಿಸಿದ ವಿಜಯ್ ಮಲ್ಯ, ತನ್ನ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮಾಡುತ್ತಿರುವ ಆರೋಪಗಳು ಸುಳ್ಳು, ಇಂದು ನ್ಯಾಯಾಲಯ ತೀರ್ಮಾನಿಸಲಿದೆ ಎಂದು ಹೇಳಿದರು.
ಆದಾಗ್ಯೂ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ವಿರುದ್ಧ ಉನ್ನತ ನ್ಯಾಯಾಂಗಕ್ಕೆ ಮೇಲ್ಮನವಿ ಸಲ್ಲಿಸಲು ಇಬ್ಬರಿಗೂ ಅವಕಾಶವಿದೆ.
ಒಂದು ವೇಳೆ ಮಲ್ಯ ಅವರನ್ನು ಲಂಡನ್ ನಿಂದ ಹಸ್ತಾಂತರಿಸಿದ್ದರೆ ಅವರನ್ನು ಮುಂಬೈಯ ಅರ್ಥರ್ ರೋಡ್ ನಲ್ಲಿರುವ ಕಾರಾಗೃಹದಲ್ಲಿಡುವ ಸಾಧ್ಯತೆ ಇದೆ. ಈ ಕಾರಾಗೃಹದಲ್ಲಿನ ಬ್ಯಾರಕ್ 12ರ ಪೋಟೋಗಳನ್ನು ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


