ಹೌದು..ಬರೊಬ್ಬರಿ 7 ದಶಕಗಳ ವೈಷಮ್ಯಕ್ಕೆ ಇಂದು ಸಿಂಗಾಪುರ ಶೃಂಗಸಭೆಯಲ್ಲಿ ತೆರೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಉತ್ತರ ಕೊರಿಯಾದ ಬದ್ದ ವೈರಿ ಮತ್ತು ಅಮೆರಿಕದ ಸ್ನೇಹ ರಾಷ್ಟ್ರ ದಕ್ಷಿಣ ಕೊರಿಯಾ ತುದಿಗಾಲಲ್ಲಿ ನಿಂತಿತ್ತು. ಸ್ವತಃ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಇಡೀ ರಾತ್ರಿ ನಿದ್ದೆ ಗೆಟ್ಟಿದ್ದಾರಂತೆ.