ಆಲ್ ಪಾಕಿಸ್ತಾನ ಮುಸ್ಲಿಂ ಲೀಗ್ ಅಧ್ಯಕ್ಷ ಸ್ಥಾನಕ್ಕೆ ಮುಷರಫ್ ರಾಜಿನಾಮೆ

ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರು ಆಲ್ ಪಾಕಿಸ್ತಾನ ಮುಸ್ಲಿಮ್ ಲೀಗ್...
ಪರ್ವೇಜ್ ಮುಷರಫ್
ಪರ್ವೇಜ್ ಮುಷರಫ್
Updated on: 
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರು ಆಲ್ ಪಾಕಿಸ್ತಾನ ಮುಸ್ಲಿಮ್ ಲೀಗ್(ಎಪಿಎಂಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಪಕ್ಷದ ನೂತನ ಅಧ್ಯಕ್ಷ ಮೊಹಮ್ಮದ್ ಅಮ್ಜದ್ ಅವರು ಹೇಳಿದ್ದಾರೆ.
ತಮ್ಮ ರಾಜಿನಾಮೆ ಪತ್ರವನ್ನು ಚುನಾವಣಾ ಆಯೋಗಕ್ಕೆ ರವಾನಿಸಿರುವ ಮುಷರಫ್ ಅವರು, ವಿದೇಶದಲ್ಲಿದ್ದುಕೊಂಡು ಪಕ್ಷ ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿಗಷ್ಟೇ ಪಾಕ್ ಸಂಸತ್ ಚುನಾವಣೆಗೆ ಎನ್ಎ-1 ಚಿತ್ರಾಲ್ ಕ್ಷೇತ್ರದಿಂದ ಮುಷರಫ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು.
ಎಪಿಎಂಎಲ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಮ್ಜದ್ ಅವರು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ರಾಷ್ಟ್ರೀಯ ಚುನಾವಣೆಯಲ್ಲಿ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com