ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣದ ಮತ್ತೋರ್ವ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಸುಮಾರು 41 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳ ಸೇರಿದಂತೆ ಒಟ್ಟು 8 ರಾಜ್ಯಗಳ ಸುಮಾರು 1200 ಕೋಟಿ ರೂಗೂ ಅಧಿಕ ಆಸ್ತಿಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.