ಬೌದ್ಧರು-ಮುಸ್ಲಿಂರ ನಡುವೆ ಹಿಂಸಾಚಾರ: ಶ್ರೀ ಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಜಾರಿ

ಕ್ಯಾಂಡಿಯ ಭಾರತೀಯ ಸಾಗರ ದ್ವೀಪದಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಘರ್ಷಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ತುರ್ತು ಪರಿಸ್ಥಿತಿಯನ್ನು ಹೇರಿದೆ...
ಶ್ರೀಲಂಕಾ
ಶ್ರೀಲಂಕಾ
ಕೊಲಂಬೊ: ಕ್ಯಾಂಡಿಯ ಭಾರತೀಯ ಸಾಗರ ದ್ವೀಪದಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಘರ್ಷಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ತುರ್ತು ಪರಿಸ್ಥಿತಿಯನ್ನು ಹೇರಿದೆ. 
ಕೋಮು ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅಲ್ಲಿನ ಸರ್ಕಾರ 10 ದಿನಗಳ ಕಾಲ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದಿದೆ. 
ಮುಸ್ಲಿಂರು ಬಲವಂತವಾಗಿ ಬುದ್ದರನ್ನು ಮತಾಂತರ ಮಾಡುತ್ತಿದ್ದಾರೆ. ಜತೆಗೆ ಬೌದ್ಧ ಮಂದಿರಗಳನ್ನು ಧ್ವಂಸ ಮಾಡುತ್ತಿದ್ದಾರೆ ಎಂದು ಬೌದ್ಧರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಹಿಂಸಾಚಾರ ವಿಕೋಪಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಜಾರಿಗೆ ತರಲಾಗಿದೆ. 
ತುರ್ತು ಸಚಿವ ಸಂಪುಟ ಸಭೆ ಕರೆ ಅಲ್ಲಿನ ಸರ್ಕಾರ ಹಿಂಸಾಚಾರ ದೇಶಾದ್ಯಂತ ಹರಡುವುದನ್ನು ತಡೆಗಟ್ಟಲು 10 ದಿನಗಳ ಕಾಲ ತುರ್ತು ಪರಿಸ್ಥಿತಿ ಹೇರಲು ನಿರ್ಧರಿಸಲಾಗಿದೆ ಎಂದು ವಕ್ತಾರ ದಯಸಿರಿ ಜಯಸೇಕರ ಹೇಳಿದ್ದಾರೆ. 
ಇನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಿಂಸಾಚಾರವನ್ನು ಹರಡುತ್ತಿರುವವರ ವಿರುದ್ಧವು ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com