ಘಟನೆಯಲ್ಲಿ ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾರ್ಮೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುರ್ತಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.