ಇನ್ನು ಬ್ರಿಟನ್ ಮೂಲದ ಚಾನಲ್ 4 ನ್ಯೂಸ್ ಪೇಸ್ ಬುಕ್ ಬಳಕೆದಾರರ ದತ್ತಾಂಶ ಸೋರಿಕೆ ಸಂಬಂಧ ಸುದ್ದಿ ಪ್ರಸಾರ ಮಾಡಿತ್ತು. ಸ್ವತಃ ಕೇಂಬ್ರಿಡ್ಜ್ ಅನಾಲಿಟಿಕ್ಸ್ ಸಂಸ್ಥೆಯ ಸಿಇಒ ಅಲೆಕ್ಸಾಂಡರ್ ನಿಕ್ಸ್ ಅವರು ಈ ಬಗ್ಗೆ ಮಾತನಾಡಿರುವ ವಿಡಿಯೋವನ್ನು ಪ್ರಸಾರ ಮಾಡಿತ್ತು. ವಿಡಿಯೋದಲ್ಲಿ ನಿಕ್ಸ್ 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವಿನಲ್ಲಿ ತಮ್ಮ ಸಂಸ್ಥೆ ನಿರ್ಣಾಯಕ ಪಾತ್ರ ನಿರ್ವಹಿಸಿತ್ತು. ಸಾಮಾಜಿಕ ಜಾಲತಾಣಗಳ ಸಂಪೂರ್ಣ ದತ್ತಾಂಶ, ಎಲ್ಲಾ ವಿಶ್ಲೇಷಣೆ, ಎಲ್ಲಾ ಗುರಿಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿತ್ತು ಎಂದು ಹೇಳಿಕೊಂಡಿದ್ದರು.