ವಾಷಿಂಗ್ಟನ್: ಇತ್ತೀಚಿಗಷ್ಟೇ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಿದ್ದ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ- ಇನ್ ಅವರು ಮೇ 22ಕ್ಕೆ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಅವರನ್ನು ಭೇಟಿ ಮಾಡುತ್ತಿದ್ದಾರೆ.
ಭೇಟಿಯ ವೇಳೆ ಮೂನ್ ಅವರು ಕಳೆದ ವಾರ ತಾವು ಕಿಮ್ ಜೊತೆ ನಡೆಸಿದ ಮಾತುಕತೆಯ ಕುರಿತು ಅಮೆರಿಕ ಅಧ್ಯಕ್ಷರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
ಕಳೆದ ಕಿಮ್ ಜಾಂಗ್ ಉನ್ ಅವರು ತಮ್ಮ ಗಡಿ ದಾಟುವ ಮೂಲಕ ಮೊದಲ ಬಾರಿಗೆ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ–ಇನ್ ಅವರನ್ನು ಭೇಟಿ ಮಾಡಿದ್ದರು.
ಟ್ರಂಪ್ ಸಹ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲೇ ಭೇಟಿಯ ಸ್ಥಳ ಮತ್ತು ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.