ಜನಾಂಗೀಯ ದ್ವೇಷದಿಂದ ಭಾರತೀಯ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿದ್ದ ಅಮೆರಿಕ ನೌಕಾದಳದ ಹಿರಿಯ ಅಧಿಕಾರಿ ಆ್ಯಡಂ ಪುರಿಂಟನ್ (52 ವರ್ಷ)ಗೆ ಅಮೆರಿಕ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀನಿವಾಸ್ ಕುಚಿಬೋಟ್ಲಾ ಅವರ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆಯಲ್ಲಿ ಆತ ಅಪರಾಧಿ ಎಂದು ಸಾಬೀತಾಗಿತ್ತು. ಇದೀಗ ಅಪರಾಧಿ ಪುರಿಂಟನ್ ಗೆ ಅಮೆರಿಕ ನ್ಯಾಯಾಲಯ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಅಪರಾಧಿ ಪುರಿಂಟನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.