ಕರಾಚಿ: ಚೀನಾ ರಾಯಭಾರಿ ಕಚೇರಿ ಮೇಲೆ ದಾಳಿ, 2 ಪೊಲೀಸ್ ಸೇರಿ 5 ಮಂದಿ ಸಾವು
ಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಬಂಧೂಕುಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ ಐವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...
ಕರಾಚಿ: ಚೀನಾ ರಾಯಭಾರಿ ಕಚೇರಿ ಮೇಲೆ ದಾಳಿ, 2 ಪೊಲೀಸ್ ಸೇರಿ 5 ಮಂದಿ ಸಾವು
ಕರಾಚಿ: ಪಾಕಿಸ್ತಾನ ರಾಜಧಾನಿ ಕರಾಚಿಯಲ್ಲಿರುವ ಚೀನಾ ರಾಯಭಾರಿ ಕಚೇರಿ ಮೇಲೆ ಬಂಧೂಕುಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ ಐವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಇಂದು ಬೆಳಿಗ್ಗೆ ಮುಸುಧಾರಿಗಳಾಗಿ ಬಂದ 3-4 ಬಂಧೂಕುಧಾರಿಗಳು ಚೀನಾ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿಗಳು ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಪಿರ್ ಮುಹಮ್ಮದ್ ಶಾಹ್ ಅವರು ಹೇಳಿದ್ದಾರೆ.
ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
ದಾಳಿ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಗಾಯಾಳುಗಳ ಕುರಿತಂತೆ ಈ ವರೆಗೂ ಯಾವುದೇ ರೀತಿಯ ಮಾಹಿತಿಗಳು ಲಭ್ಯವಾಗಿಲ್ಲ.
ಇಬ್ಬರು ಪೊಲೀಸರ ಸಾವು ಕುರಿತಂತೆ ಡಿಐಜಿ ಜಾವೆದ್ ಆಲಂ ಒಡೋ ಅವರು ದೃಢಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಸ್ಫೋಟಗೊಂಡಿದ್ದು, ಪ್ರಸ್ತುತ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ ಎಂದು ವರದಿಗಳು ತಿಳಿಸಿವೆ.