ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಪಾಕ್ ಅವಮಾನ: ಪ್ರತಿಭಟನೆ ದಾಖಲಿಸಿದ ಭಾರತ

ಕರ್ತಾರ್ಪುರ ಕಾರಿಡಾರ್ ಒಪ್ಪಂದವಾದ 24 ಗಂಟೆಗಳಲ್ಲೇ ಗುರುದ್ವಾರಕ್ಕೆ ತೆರಳಲು ಮುಂದಾಗಿದ್ದ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಕರ್ತಾರ್ಪುರ ಕಾರಿಡಾರ್ ಒಪ್ಪಂದವಾದ 24 ಗಂಟೆಗಳಲ್ಲೇ ಗುರುದ್ವಾರಕ್ಕೆ ತೆರಳಲು ಮುಂದಾಗಿದ್ದ  ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಪಾಕಿಸ್ತಾನ ಅವಮಾನ ಮಾಡಿದ್ದು, ಪಾಕಿಸ್ತಾನದ ಈ ದುರ್ವರ್ತನೆಗೆ ಭಾರತ ಶುಕ್ರವಾರ ತೀವ್ರ ಪ್ರತಿಭಟನೆ ದಾಖಲಿಸಿದೆ. 
ಪಾಕಿಸ್ತಾನ ವಿದೇಶಾಂಗ ಸಚಿವಾಲಯವೇ ಈ ಹಿಂದೆ ಭಾರತೀಯ ರಾಯಭಾರಿ ಅಧಿಕಾರಿಗಳಿಗೆ ಗುರುದ್ವಾರ ಪ್ರವೇಶಿಸಲು ಅನುಮತಿ ನೀಡಿತ್ತು. ಅನುಮತಿ ನೀಡಿದ್ದರೂ, ನ.21 ಮತ್ತು 22 ರಂದು ಗುರುದ್ವಾರಕ್ಕೆ ತೆರಳಿದ್ದ ಭಾರತೀಯ ರಾಯಭಾರಿ ಅಧಿಕಾರಿಗಳ ಮೇಲೆ ನಿರ್ಬಂಧ ಹೇರಿ ಕಿರುಕುಳ ನೀಡಲಾಗಿದೆ. ಪಾಕಿಸ್ತಾನದ ಈ ವರ್ತನೆ ವಿರುದ್ಧ ಭಾರತ ಪ್ರತಿಭಟಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. 
ಗುರುದ್ವಾರಕ್ಕೆ ತೆರಳುತ್ತಿದ್ದ ಭಾರತೀಯ ಅಧಿಕಾರಿಗಳಿಗೆ ಅನುಮತಿ ನಿರಾಕರಿಸುವ ಮೂಲಕ ಪಾಕಿಸ್ತಾನ ಅವಮಾನ ಮಾಡಿದೆ.
ಭಾರತ ಹಾಗೂ ಇಡೀ ವಿಶ್ವದಲ್ಲಿ ಸಾಕಷ್ಟು ಗುರುದ್ವಾರಗಳಿವೆ. ಆದರೆ, ಎಲ್ಲಿಯೂ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ನಮಗೆ ಈ ರೀತಿ ಆಗುತ್ತಿರುವುದು ಇದೇ ಮೊದಲು, ಗುರುದ್ವಾರಕ್ಕೆ ತೆರಳುತ್ತಿದ್ದ ವೇಳೆ ನಮ್ಮನ್ನು ಪಾಕಿಸ್ತಾನ ಅಧಿಕಾರಿಗಳು ತಡೆಹಿಡಿದರು. ಇದು ಗುರುದ್ವಾರದ ಪಾವಿತ್ರ್ಯತೆಯನ್ನು ನಾಶ ಮಾಡಿದಂತಾಗುತ್ತದೆ. ಎಂದು ಭಾರತೀಯ ರಾಯಭಾರಿ ಅಧಿಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com