ಭ್ರಷ್ಟಾಚಾರ ಪ್ರಕರಣ: ಬಾಂಗ್ಲಾದೇಶ ಮಾಜಿ ಪ್ರಧಾನಿಗೆ 7 ವರ್ಷ ಜೈಲು ಶಿಕ್ಷೆ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ...
ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ
ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ
ಢಾಕಾ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪ್ರಧಾನಮಂತ್ರಿ ಖಲೀದಾ ಜಿಯಾ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.  
ಖಲೀದಾ ಅವರು ಹಣ ದುರುಪಯೋಗ ಪ್ರಕರಣದಲ್ಲಿ ಈಗಾಗಲೇ 5 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಇದೀಗ ಭ್ರಷ್ಟಾಚಾರ ಪ್ರಕರಣದಲ್ಲೂ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ
ಖಲೀದಾ ಅವರು 2018ರ ಫೆಬ್ರವರಿ ತಿಂಗಳಿನಲ್ಲಿ ಜೈಲು ಸೇರಿದ್ದರು. ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ ಮುಖ್ಯಸ್ಥರಾಗಿದ್ದ ಖಲೀದಾ ಅವರು ಜಿಯಾ ಅರ್ಫನೇಜ್ ಟ್ರಸ್ಟ್'ಗೆ ಮೀಸಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. 
ಈ ಪ್ರಕರಣದಲ್ಲಿ ಖರೀದಾ ಅವರ ಪುತ್ರ ತಾರೀಖ್ ರೆಹ್ಮಾನ್ ಸೇರಿ ಹಲವು ಆರೋಪಿಗಳಿದ್ದು, ಎಲ್ಲರಿಗೂ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣದ ತನಿಖೆ ಆದೇಶಕ್ಕೆ ತಡೆ ನೀಡುವಂತೆ ಈ ಹಿಂದೆ ಖಲೀದಾ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಗ್ಲಾದೇಶ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. 
ಖಲೀದಾ ಅವರು ಎರಡು ಬಾರಿ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಾಗಿದ್ದರು. ವಿರೋಧ ಪಕ್ಷದ ನಾಯಕಿಯಾಗಿರೂ ಕಾರ್ಯನಿರ್ವಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com