ಇದೇ ವೇಳೆ ಸಿಯೋಲ್ ಶಾಂತಿ ಪ್ರಶಸ್ತಿಯ ಬಗ್ಗೆಯೂ ಮಾತನಾಡಿರುವ ದಕ್ಷಿಣ ಕೊರಿಯಾ ಅಧ್ಯಕ್ಷ, ಸಿಯೋಲ್ ಶಾಂತಿ ಪ್ರಶಸ್ತಿ ಪಡೆದಿರುವ ಬಗ್ಗೆ ಪ್ರಧಾನಿ ಮೋದಿ ಮಾಡಿರುವ ಟ್ವೀಟ್ ಗಳನ್ನು ಓದಿದ್ದೇನೆ, ಪ್ರಧಾನಿ ಮೋದಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ದಕ್ಷಿಣ ಕೊರಿಯಾದ ಪ್ರಥಮ ಮಹಿಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂನ್-ಜೇ-ಇನ್ ಮಾಹಿತಿ ನೀಡಿದ್ದಾರೆ.