ಸಲಿಂಗ ಕಾಮ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದೇನು?

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗಿದ್ದು, ವಿಶ್ವಸಂಸ್ಥೆಯೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.
ಸಲಿಂಗ ಕಾಮ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದೇನು?
ಸಲಿಂಗ ಕಾಮ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದೇನು?
ದೇಶಾದ್ಯಂತ ಸಲಿಂಗ ಕಾಮವನ್ನು ಅಪರಾಧದ ಪರಿಧಿಯಿಂದ ಹೊರಗಿಟ್ಟಿರುವ ಸುಪ್ರೀಂ ಕೋರ್ಟ್ ತೀರ್ಪಿನದ್ದೇ ಸುದ್ದಿ, ಚರ್ಚೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗಿದ್ದು, ವಿಶ್ವಸಂಸ್ಥೆಯೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ. 
ಎಲ್ ಜಿಬಿಟಿಐಕ್ಯೂ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ವಿಶ್ವಸಂಸ್ಥೆ, ಸುಪ್ರೀಂ ಕೋರ್ಟ್ ನ ತೀರ್ಪು ಸಲಿಂಗ ಕಾಮದ ಬಗ್ಗೆ ಸಮಾಜದಲ್ಲಿರುವ ಕಳಂಕ ಭಾವನೆಯನ್ನು ತೊಡೆದು ಹಾಕುವುದಕ್ಕೆ ಸಹಕಾರಿ ಎಂದು ಹೇಳಿದೆ. 
ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಎಲ್ ಜಿ ಬಿಟಿಐಕ್ಯೂ ಸಮುದಾಯದೆಡೆಗೆ ತೋರಲಾಗುತ್ತಿದ್ದ ತಾರತಮ್ಯಕ್ಕೆ ತೆರೆ ಬೀಳಲಿದೆ.   ಲೈಂಗಿಕ ದೃಷ್ಟಿಕೋನ, ಲಿಂಗ ಅಭಿವ್ಯಕ್ತಿ ಎಂಬುದು ವಿಶ್ವಾದ್ಯಂತ ವೈಯಕ್ತಿಕ ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ತೀರ್ಪು ಸ್ವಾಗತಾರ್ಹವಾಗಿದ್ದು, ಎಲ್ ಜಿಬಿಟಿ ಸಮುದಾಯಕ್ಕೆ ಮೂಲಭೂತ ಹಕ್ಕುಗಳನ್ನು ದೊರಕಿಸಿಕೊಡಲಿದೆ ಎಂದು ವಿಶ್ವಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com