ಇಮ್ರಾನ್ ಖಾನ್
ವಿದೇಶ
ದೇಶ ನಡೆಸಲು ನಮ್ಮ ಬಳಿ ಹಣವಿಲ್ಲ, ದೇವರೇ ಈ ಪರಿಸ್ಥಿತಿ ತಂದಿದ್ದಾನೆ: ಇಮ್ರಾನ್ ಖಾನ್
ಪಾಕಿಸ್ಥಾನವನ್ನು ನಡೆಸಲು ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ ಸರ್ಕಾರದ ಬಳಿ ಹಣವಿಲ್ಲ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ...
ಇಸ್ಲಮಾಬಾದ್: ಪಾಕಿಸ್ಥಾನವನ್ನು ನಡೆಸಲು ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ ಸರ್ಕಾರದ ಬಳಿ ಹಣವಿಲ್ಲ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ನಡೆದ ಉನ್ನತ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ದೇಶದ ಸಂಪತ್ತನ್ನು ಹೆಚ್ಚಿಸುವ ಕೆಲಸ ಮಾಡುವ ಬದಲು ನಷ್ಟ ಉಂಟುಮಾಡುವ ಯೋಜನೆಗಳನ್ನು ಕೈಗೊಂಡು ದೇಶದ ಆರ್ಥಿಕತೆಗೆ ಭಾರೀ ಹಾನಿ ಉಂಟುಮಾಡಿದೆ ಎಂದು ಇಮ್ರಾನ್ ಖಾನ್ ಹೇಳಿದರು.
ದೇಶದ ಜನಸಂಖ್ಯೆಯ ಬಹುಪಾಲು ಜನರು ಯುವಕರಾಗಿದ್ದು ಅವರು ಉದ್ಯೋಗಗಳನ್ನು ಎದುರು ನೋಡುತ್ತಿದ್ದಾರೆ. ದೇಶ ಸಾಧ್ಯವಾದಷ್ಟು ಬೇಗನೆ ಸಾಲದ ಹೊರೆಯಿಂದ ಮುಕ್ತವಾಗಬೇಕಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ