ಇಮ್ರಾನ್ ಖಾನ್ ಅವರು ಪ್ರಧಾನಿಯಾದ ಮೇಲೆ ಇದೇ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 18ರಿಂದ ಎರಡು ದಿನಗಳ ಸೌದಿ ಪ್ರವಾಸ ಆರಂಭಿಸಿದ್ದಾರೆ. ಈ ವೇಳೆ ಇಮ್ರಾನ್ ಖಾನ್ ಸೌದಿ ದೊರೆ ಸಲ್ಮಾನ್ ಬಿನ್ ಅಬುಲಾಜಿಜ್ ಮತ್ತು ದೊರೆ ಮೊಹಮದ್ ಬಿನ್ ಸಲ್ಮಾನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.