ಅಮೆರಿಕದ ನ್ಯೂಯಾರ್ಕ್ ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್ ಖುರೇಶಿ ನಡುವೆ ಸಭೆ ನಡೆಸುವ ಬಗ್ಗೆ ಪರಿಶೀಲಿಸುವಂತೆ ಪತ್ರದಲ್ಲಿ ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ. ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್ ಖಾನ್ ಈ ಪತ್ರ ಬರೆದಿದ್ದಾರೆ ಎನ್ನಲಾಗಿದೆ.