ಚೀನಾ ಸೇನೆ ರಷ್ಯಾದಿಂದ ಫೈಟರ್ ಜೆಟ್ ಗಳನ್ನು ಖರೀದಿಸುವುದರ ವಿರುದ್ಧ ವಿಧಿಸಲಾಗಿರುವ ನಿರ್ಬಂಧದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಠಿಣ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ವಿದೇಶಾಂಗ ನೀತಿಗಳ ಪ್ರಾಥಮಿಕ ನಿಯಮಗಳನ್ನೇ ಉಲ್ಲಂಘನೆ ಮಾಡುತ್ತಿದೆ. ಈ ಮೂಲಕ ಚೀನಾದೊಂದಿಗಿನ ಸಂಬಂಧವನ್ನು ಕದಡಿದೆ, ನಿರ್ಬಂಧವನ್ನು ಹಿಂಪಡೆಯುವಂತೆ ಅಮೆರಿಕ ಮೇಲೆ ಒತ್ತಡ ಹೇರಲಾಗುವುದು ಎಂದು ಚೀನಾ ಹೇಳಿದೆ.