ಅಹಂಕಾರದ ಮತ್ತು ನಕಾರಾತ್ಮಕ ಪ್ರತಿಕ್ರಿಯೆ: ಭಾರತ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟೀಕೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ಉಪಟಳ ಹಾಗೂ ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆಗೈದ ಘಟನೆಯಿಂದ ಭಾರತ ಸರ್ಕಾರ...
ನರೇಂದ್ರ ಮೋದಿ-ಇಮ್ರಾನ್ ಖಾನ್
ನರೇಂದ್ರ ಮೋದಿ-ಇಮ್ರಾನ್ ಖಾನ್
Updated on: 
ಇಸ್ಲಾಮಾಬಾದ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ಉಪಟಳ ಹಾಗೂ ಮೂವರು ಪೊಲೀಸರನ್ನು ಅಪಹರಿಸಿ ಹತ್ಯೆಗೈದ ಘಟನೆಯಿಂದ ಭಾರತ ಸರ್ಕಾರ ಪಾಕ್ ನೊಂದಿಗೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಪಡಿಸಿದ್ದು ಇದಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ನ್ಯೂಯಾರ್ಕ್ ನಲ್ಲಿ ಇದೇ ತಿಂಗಳ ಅಂತ್ಯದಲ್ಲಿ ನಡೆಯಬೇಕಿದ್ದ ವಿದೇಶಾಂಗ ಸಚಿವರ ಮಟ್ಟದ ಮಾತುಕತೆಯನ್ನು ಭಾರತ ರದ್ದುಗೊಳಿಸಿದೆ. ಭಾರತದ ಈ ನಡೆಯಿಂದ ಅಸಮಾಧಾನಗೊಂಡಿರುವ ಇಮ್ರಾನ್ ಖಾನ್ ಭಾರತದ ಈ ನಿರ್ಧಾರದಿಂದ ಶಾಂತಿ ಪ್ರಕ್ರಿಯೆ ಆರಂಭಿಸುವ ಯತ್ನಗಳಿಗೆ ಹಿನ್ನಡೆಯಾಗಿದೆ. ಇದು ಭಾರತದ ಅಹಂಕಾರದ ಮತ್ತು ನಕಾರಾತ್ಮಕ ಪ್ರತಿಕ್ರಿಯೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಶಾಂತಿಯುತ ಮಾತುಕತೆಗೆ ಭಾರತ ಸ್ಪಂದನೆ ಸರಿಯಿಲ್ಲ ಎಂದು ಹೇಳಿದ್ದಾರೆ. 
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಪೊಲೀಸರನ್ನು ಅಪಹರಿಸಿ ಹತ್ಯೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com