ಭಾರತವನ್ನು ನಾನು ಪ್ರೀತಿಸುತ್ತೇನೆ, ಸುಷ್ಮಾ ಸ್ವರಾಜ್ ಮೂಲಕ ಮೋದಿಗೆ ಶುಭ ಸಂದೇಶ ರವಾನಿಸಿದ ಟ್ರಂಪ್ !
ಭಾರತವನ್ನು ತಾನು ಪ್ರೀತಿಸುತ್ತೇನೆ ಎಂದು ಹೇಳಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಶುಭ ಸಂದೇಶ ಕಳುಹಿಸಿದ್ದಾರೆ.
ನ್ಯೂಯಾರ್ಕ್ :ಭಾರತವನ್ನು ತಾನು ಪ್ರೀತಿಸುತ್ತೇನೆ ಎಂದು ಹೇಳಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಶುಭ ಸಂದೇಶ ಕಳುಹಿಸಿದ್ದಾರೆ.
ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಾಗತಿಕ ಮಟ್ಟದ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಾನು ಭಾರತವನ್ನು ಪ್ರೀತಿಸುತ್ತೇನೆ, ಗೆಳೆಯ ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ಶುಭಾಶಯ ತಿಳಿಸು ಎಂದು ಹೇಳಿದ್ದಾರೆ.