ರಾಫೆಲ್ ವಿವಾದದಿಂದ ಭಾರತ-ಫ್ರಾನ್ಸ್ ಸಂಬಂಧಕ್ಕೆ ಧಕ್ಕೆ: ಫ್ರಾನ್ಸ್ ಆತಂಕ

ಭಾರತ ಮತ್ತು ಫ್ರಾನ್ಸ್ ನಡುವಿನ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಎದ್ದಿರುವ ವಿವಾದದಿಂದಾಗಿ ಉಭಯ ದೇಶಗಳ ನಡುವಣ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಪ್ಯಾರಿಸ್: ಭಾರತ ಮತ್ತು ಫ್ರಾನ್ಸ್ ನಡುವಿನ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಎದ್ದಿರುವ ವಿವಾದದಿಂದಾಗಿ ಉಭಯ ದೇಶಗಳ ನಡುವಿನ ಸೌಹಾರ್ಧ ಸಂಬಂಧಕ್ಕೆ ಧಕ್ಕೆಯಾಗುತ್ತಿದೆ ಎಂದು ಫ್ರಾನ್ಸ್ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಬಗ್ಗೆ ಮಾತನಾಡಿರುವ ಫ್ರಾನ್ಸ್ ನ ವಿದೇಶಾಂಗ ಇಲಾಖೆಯ ಸಚಿವ ಜೀನ್-ಬ್ಯಾಪ್ಟಿಸ್ಟ್ ಲೆಮೊಯ್ನೆ ಅವರು, ಭಾರತ ಮತ್ತು ಫ್ರಾನ್ಸ್ ನಡುವೆ ಏರ್ಪಟ್ಟಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಅತ್ಯಂತ ಮಹತ್ವವಾದದ್ದು. ಆದರೆ ಈ ಬಗ್ಗೆ ಎದ್ದಿರುವ ವಿವಾದಗಳಿಂದಾಗಿ ಉಭಯ ದೇಶಗಳ ಸಂಬಂಧಕ್ಕೆ ಧಕ್ಕೆಯಾಗುತ್ತಿದೆ. ಭವಿಷ್ಯದ ವಾಣಿಜ್ಯ ಸಂಬಂಧಗಳ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾವು ಇದೇ ಫ್ರಾನ್ಸ್ ಸರ್ಕಾರಿ ಕಚೇರಿಗಳಲ್ಲಿ ಶಾಶ್ವತವಾಗಿ ನೆಲೆಸೆರುವುದಿಲ್ಲ. ಆದರೆ ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಶಾಶ್ವತವಾಗಿರಬೇಕು ಎಂದು ಪ್ರಸ್ತುತ ಕಚೇರಿಯಲ್ಲಿರುವವರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಮನಬಂದಂತೆ ಹೇಳಿಕೆಗಳನ್ನು ನೀಡಿದರೆ ಉಭಯ ದೇಶಗಳ ಸಂಬಂಧದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಯಾರೇ ಆಗಲಿ ಇದನ್ನು ಮನದಲ್ಲಿಟ್ಟುಕೊಂಡು ವ್ಯಯಕ್ತಿಕ ಹಿತಾಸಕ್ತಿಗಾಗಿ ಅಲ್ಲದೆ ದೇಶದ ಹಿತಾಸಕ್ತಿಗಾಗಿ ದುಡಿಯಬೇಕು. ಇದನ್ನು ಮನದಲ್ಲಿಟ್ಟುಕೊಂಡು ಹೇಳಿಕೆಗಳನ್ನು ನೀಡಬೇಕು ಎಂದು ಪರೋಕ್ಷವಾಗಿ ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇತ್ತೀಚೆಗಷ್ಟೇ ರಾಫೆಲ್ ಒಪ್ಪಂದ ಸಂಬಂಧ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ನೀಡಿದ್ದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೇ ವಿಚಾರವಾಗಿ ಭಾರತದಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಕ್ಸಮರ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com