ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಯಾವುದೇ ಕಾರಣಕ್ಕೂ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿದರೆ ಸಹಿಸುವುದಿಲ್ಲ: ಪಾಕಿಸ್ತಾನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನದ 370ನೇ ವಿಧಿಯ ಸವಲತ್ತುಗಳನ್ನು ರದ್ದು ಮಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಇಸ್ಲಾಮಾಬಾದ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನದ 370ನೇ ವಿಧಿಯ ಸವಲತ್ತುಗಳನ್ನು ರದ್ದು ಮಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಈ ಬಗ್ಗೆ ತನ್ನ ಪ್ರಕಟಣೆ ಬಿಡುಗಡೆ ಮಾಡಿರುವ ಪಾಕಿಸ್ತಾನ, ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಲಾಗಿರುವ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದರೆ ಅದನ್ನು ಸಹಿಸಲಾಗುವುದಿಲ್ಲ. ಭಾರತೀಯ ಸವಿಂಧಾನದಿಂದ 370ನೇ ವಿಧಿಯನ್ನು ರದ್ದು ಮಾಡುವುದು ವಿಶ್ವಸಂಸ್ಥೆಯ ನಿಯಮಗಳಿಗೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ಪಾಕಿಸ್ತಾನ ಇದನ್ನು ಸಹಿಸುವುದಿಲ್ಲ. ಕಾಶ್ಮೀರ ಕೂಡ ಇದನ್ನು ಸ್ವೀಕರಿಸುವುದಿಲ್ಲ ಎಂದು ಪಾಕಿಸ್ತಾನ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.
ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದು ಮಾಡಲು ನಾವು ಸದಾ ಸಿದ್ಧ ಎಂದು ಬಿಜೆಪಿ ನಾಯಕರು ನಿರಂತರವಾಗಿ ಹೇಳಿಕೊಳ್ಳುತ್ತಾ ಬಂದಿದ್ದರು. ಇದಕ್ಕೆ ಕಾಂಗ್ರೆಸ್​ ಕೂಡ ಅಪಸ್ವರ ಎತ್ತಿದ್ದು, ಇದರ ಬೆನ್ನಲ್ಲೇ ಪಾಕಿಸ್ತಾನ ಈ ರೀತಿಯ ಹೇಳಿಕೆ ನೀಡಿದೆ.

Related Stories

No stories found.

Advertisement

X
Kannada Prabha
www.kannadaprabha.com