ಆಸ್ಟ್ರೇಲಿಯಾದ ಎರಡನೇ ದೊಡ್ಡ ನಗರವಾದ ಮೆಲ್ಬೋರ್ನ್ ನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅಲ್ಲಿನ ನೈಟ್ ಕ್ಲಬ್ ವೊಂದರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕ್ಲಬ್ ನಲ್ಲಿದ್ದ ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.